ಬಿಗ್ ಬಾಸ್ ಖ್ಯಾತಿಯ ರಾಜೀವ್ ಗೆ ಕಿಚ್ಚನ ಸಾಥ್: ಸುದ್ದಿ ಕೇಳಿ ಥ್ರಿಲ್ಲಾದ ಅಭಿಮಾನಿಗಳು
Kichcha Sudeep : ಕನ್ನಡ ಸಿನಿಮಾ ರಂಗದ ಜನಪ್ರಿಯ ನಟ ಕಿಚ್ಚ ಸುದೀಪ್ ಅವರು ಹೊಸ ಸಿನಿಮಾಗಳನ್ನು ಘೋಷಣೆ ಮಾಡಿದಾಗಲೆಲ್ಲಾ ಅವರ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗುತ್ತಾರೆ. ಕನ್ನಡ ಮಾತ್ರವೇ ಅಲ್ಲದೇ ಅನ್ಯ ಭಾಷೆಗಳಲ್ಲಿ ಸಹಾ ನಟಿಸುತ್ತಾ ಅಲ್ಲೂ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಬಹುಭಾಷಾ ನಟನಾಗಿ ತನ್ನ ನಟನೆಯ ಮೂಲಕವೇ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ ಕಿಚ್ಚ ಸುದೀಪ್. ಬೆಳ್ಳಿ ತೆರೆಯಲ್ಲಿ ಮಾತ್ರವೇ ಅಲ್ಲದೇ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಎನ್ನುವ ಖ್ಯಾತಿಗೆ ಭಾಜನವಾಗಿರುವ ಬಿಗ್ ಬಾಸ್ ನ ನಿರೂಪಣೆ ಸಹಾ ಮಾಡುತ್ತಾ ಬರುತ್ತಿದ್ದಾರೆ.
ಈಗ ಸುದೀಪ್ ಅವರ ಸಿನಿಮಾ ವಿಚಾರವಾಗಿ ಹೊಸದೊಂದು ಅಪ್ಡೇಟ್ ಹೊರ ಬಂದಿದೆ. ಸಿಸಿಎಲ್ ಆಟಗಾರ, ಬಿಗ್ ಬಾಸ್ ನ ಮಾಜಿ ಸ್ಪರ್ಧಿ ರಾಜೀವ್ ಅವರು ಬಿಗ್ ಬಾಸ್ ನಿಂದ ಹೊರಗೆ ಬಂದ ಮೇಲೆ ಸಿನಿಮಾವೊಂದರಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಜೀವ್ ಅವರ ಉಸಿರೇ ಉಸಿರೇ ಎನ್ನುವ ಹೆಸರಿನ ಸಿನಿಮಾದಲ್ಲಿ ನಾಯಕನಾಗಿದ್ದು, ಇದನ್ನು ಸಿ ಎಂ ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಸಹಾ ಬಹುತೇಕ ಕೊನೆಯ ಹಂತವನ್ನು ತಲುಪಿದೆ ಎನ್ನಲಾಗಿದೆ. ಇನ್ನು ರಾಜೀವ್ ಅವರು ಕಿಚ್ಚ ಸುದೀಪ್ ಅವರ ಆತ್ಮೀಯ ಸ್ನೇಹಿತರ ಬಳಗದಲ್ಲಿ ಒಬ್ಬರಾಗಿದ್ದಾರೆ.
ಈಗ ರಾಜೀವ್ ನಾಯಕನಾಗಿರುವ ಉಸಿರೇ ಉಸಿರೇ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅವರು ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರ ಬಂದಿದೆ. ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರ ತಂಡವು ಈ ಪಾತ್ರಕ್ಕಾಗಿ ಸುದೀಪ್ ಅವರ ಅನುಮತಿ ಪಡೆಯಲು ಅವರನ್ನು ಭೇಟಿಯಾಗಿದ್ದು, ಕಿಚ್ಚ ಸುದೀಪ್ ಅವರು ಸಹಾ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ರಾಜೀವ್ ಸಿನಿಮಾಕ್ಕೆ ಸುದೀಪ್ ಸಾಥ್ ನೀಡುತ್ತಿರುವ ವಿಚಾರ ಕೇಳಿ ಅವರ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ.