Aishwarya Abhishek: ಆ ಒಂದು ಫೋಟೋ ಸೃಷ್ಟಿಸಿದ ಸಂಚಲನ! ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ದಾಂಪತ್ಯ ಜೀವನದಲ್ಲಿ ಬಿರುಕು?

0 3

Aishwarya Abhishek: ನಮ್ಮ ಕರ್ನಾಟಕದ ಬೆಡಗಿ, ಮಂಗಳೂರಿನ ಹುಡುಗಿ ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಅವರ ಬಗ್ಗೆ ಹೊಸದಾಗಿ ಪರಿಚಯ ಮಾಡಿಕೊಡುವ ಅವಶ್ಯಕತೆ ಇಲ್ಲ. ಕರ್ನಾಟಕದ ಹೆಸರನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋದವರಲ್ಲಿ ಐಶ್ವರ್ಯ ರೈ ಕೂಡ ಒಬ್ಬರು. ಮೊದಲಿಗೆ ದಕ್ಷಿಣ ಭಾರತದಲ್ಲಿ ಹೆಸರು ಮಾಡಿದ್ದ ಐಶ್ವರ್ಯ ರೈ ಅವರು ಬಳಿಕ ಬಾಲಿವುಡ್ ನಲ್ಲಿ ಹೆಸರು ಮಾಡಿದರು. ಈಗಲೂ ಕೂಡ ಇವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ.

ಐಶ್ವರ್ಯ ರೈ ಅವರು ಬಾಲಿವುಡ್ ನಲ್ಲಿ ಸ್ಟಾರ್ ನಟಿಯಾಗಿ ಹೆಸರು ಮಾಡಿದ್ದಾರೆ. ಎಲ್ಲಾ ಸ್ಟಾರ್ ಹೀರೋಗಳ ಜೊತೆಗೆ ನಟಿಸಿ, ಹಾಲಿವುಡ್ ನಲ್ಲಿ ಸಹ ಸಿನಿಮಾಗಳಲ್ಲಿ ನಟಿಸಿ, ವರ್ಲ್ಡ್ ಸಿನಿಮಾದಲ್ಲಿ ತಮ್ಮ ಹೆಸರು ಸ್ಥಾಪಿಸಿದ್ದಾರೆ. ವಿಶ್ವದಲ್ಲೇ ಅತ್ಯಂತ ಸುಂದರವಾದ ಮಹಿಳೆ ಎಂದು ಕೂಡ ಹೆಸರು ಪಡೆದಿದ್ದಾರೆ. ಕೆರಿಯರ್ ನಲ್ಲಿ ಪೀಕ್ ನಲ್ಲಿ ಇದ್ದಾಗಲೇ ಮದುವೆಯಾದರು. ಬಾಲಿವುಡ್ ನ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್ ಅವರೊಡನೆ ಮದುವೆಯಾದರು.

ಐಶ್ವರ್ಯ ರೈ ಅವರ ಅಭಿಷೇಕ್ ಬಚ್ಚನ್ ಅವರೊಡನೆ ಮದುವೆಯಾದ ಬಳಿಕ ಈ ಜೋಡಿಗೆ ಹೆಣ್ಣು ಮಗು ಜನಿಸಿತು, ಮಗಳಿಗೆ ಆರಾಧ್ಯ ಬಚ್ಚನ್ ಎಂದು ಹೆಸರಿಟ್ಟಿದ್ದಾರೆ. ಆರಾಧ್ಯ ಈಗ ಶಾಲೆಯಲ್ಲಿ ಓದುತ್ತಿದ್ದಾರೆ. 16 ವರ್ಷಗಳಿಂದ ಸುಂದರವಾಗಿದ್ದ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿರಬೇಕು ಎನ್ನುವ ವದಂತಿ ಈಗ ಕೇಳಿ ಬರುತ್ತಿದೆ. ಅದಕ್ಕೆ ಕಾರಣ ಆಗಿರುವುದು ಅಭಿಷೇಕ್ ಬಚ್ಚನ್ ಅವರ ಒಂದು ಪೋಟೋ.

ಅಭಿಷೇಕ್ ಬಚ್ಚನ್ ಅವರು ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು ತಮ್ಮ ವೆಡ್ಡಿಂಗ್ ರಿಂಗ್ ಧರಿಸಿಲ್ಲ. ಅಭಿಷೇಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಫೋಟೋಗಳನ್ನು ನೋಡಿದರೆ ಎಲ್ಲದರಲ್ಲೂ ವೆಡ್ಡಿಂಗ್ ರಿಂಗ್ ಧರಿಸಿದ್ದಾರೆ. ಆದರೆ ಇದೇ ಮೊದಲ ಸಾರಿ ವೆಡ್ಡಿಂಗ್ ರಿಂಗ್ ಇಲ್ಲದೆಯೇ ಕಾಣಿಸಿಕೊಂಡಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಈ ಸುಂದರವಾದ ಜೋಡಿಯ ಸಂಸಾರ ಮುರಿದು ಬೀಳುತ್ತಿದೆಯಾ? ಇವರಿಬ್ಬರು ದೂರ ಆಗ್ತಿದ್ದಾರಾ ಎನ್ನುವ ಅನುಮಾನ ಈಗ ಶುರುವಾಗಿದೆ. ನೀವಿಬ್ಬರೂ ಕೂಡ ವಿಚ್ಛೇದನ ಪಡೆಯುತ್ತಿದ್ದೀರಾ ಎಂದು ನೆಟ್ಟಿಗರು ಕೂಡ ಪ್ರಶ್ನೆ ಮಾಡುತ್ತಿದ್ದಾರೆ. ಇನ್ನು ಕೆಲವರು ಈ flop hero ಜೊತೆಗೆ ಇರುವುದಕ್ಕಿಂತ ಐಶ್ವರ್ಯ ರೈ ವಿಚ್ಚೇದನ ಕೊಡುವುದೇ ಒಳ್ಳೆಯದು ಎನ್ನುತ್ತಿದ್ದಾರೆ. ಈ ವಿಚಾರದಲ್ಲಿ ಇರುವ ಸತ್ಯ ಎಷ್ಟು ಎನ್ನುವುದು ಗೊತ್ತಿಲ್ಲ.

ಇಷ್ಟು ವರ್ಷಗಳಲ್ಲಿ ಬಚ್ಚನ್ ಕುಟುಂಬದಲ್ಲಿ ಬಿರುಕು ಇದೆ ಎಂದು ಬಹಿರಂಗವಾಗಿ ಎಲ್ಲಿಯೂ ತೋರಿಸಿಕೊಂಡಿಲ್ಲ. ಅತ್ತೆ ಜಯಾ ಬಚ್ಚನ್ ಅವರೊಡನೆ ಐಶ್ವರ್ಯ ಅವರ ಬಾಂಧವ್ಯ ಅಷ್ಟಕ್ಕಷ್ಟೇ ಎಂದು ಹೇಳಲಾಗುತ್ತದೆ. ಆದರೆ ಅಭಿಷೇಕ್ ಅವರೊಡನೆ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಈಗ ಇಂಥದ್ದೊಂದು ವದಂತಿ ಕೇಳಿ ಬರುತ್ತಿದೆ.

Leave A Reply

Your email address will not be published.