ಚಿನ್ನ ಖರೀದಿದಾರರಿಗೆ ಲಾಟರಿ!ಅಕ್ಷಯ ತೃತೀಯ ದಿನವೇ ಚಿನ್ನ ಅಗ್ಗ!
Akshaya Tritiya 2023 Gold Price :ಅಕ್ಷಯ ತೃತೀಯ 2023 ರಂದು ಚಿನ್ನ ಖರೀದಿಸಲು ಬಯಸುವವರಿಗೆ ಒಳ್ಳೆಯ ಸುದ್ದಿ ಇದೆ. ನೀವೂ ಚಿನ್ನವನ್ನು ಖರೀದಿಸಲು ಯೋಜಿಸುತ್ತಿದ್ದರೆ, ಚಿನ್ನದ ದರ ಎಷ್ಟು ಎಂದು ತಿಳಿಯಿರಿ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ನಾಳೆ ಅಂದರೆ ಏಪ್ರಿಲ್ 22 ರಂದು ಅಕ್ಷಯ ತೃತೀಯ ಹಬ್ಬವಿದ್ದು, ಇದಕ್ಕೂ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇಂದು ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ ಅಗ್ಗವಾಗಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಈ ಬಗ್ಗೆ ಮಾಹಿತಿ ನೀಡಿದೆ.
ದುರ್ಬಲ ಜಾಗತಿಕ ಸೂಚನೆಗಳ ನಡುವೆ, ಶುಕ್ರವಾರ ರಾಷ್ಟ್ರ ರಾಜಧಾನಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 430 ರೂ ಇಳಿದು 60,980 ರೂನಿಂದ 60,550 ರೂ.ಗೆ ಇಳಿದಿದೆ. ಅದೇ ಸಮಯದಲ್ಲಿ, ಕಳೆದ ವಹಿವಾಟಿನಲ್ಲಿ, ಚಿನ್ನದ ಬೆಲೆ 10 ಗ್ರಾಂಗೆ 60,980 ರೂ ಅಗಿತ್ತು. ಅದೇ ಸಮಯದಲ್ಲಿ, ಬೆಳ್ಳಿಯ ಬೆಲೆಯು ಸಹ ಪ್ರತಿ ಕೆಜಿಗೆ 670 ರೂ.ನಷ್ಟು ಇಳಿಕೆಯಾಗಿ 75,080 ರೂ.
ತಜ್ಞರ ಅಭಿಪ್ರಾಯವೇನು ಗೊತ್ತಾ?
ಅಕ್ಷಯ ತೃತೀಯ ದಿನದಂದು ಚಿಲ್ಲರೆ ಬೇಡಿಕೆ ಸುಧಾರಿಸುವ ಸಾಧ್ಯತೆಯಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ (ಸರಕುಗಳು) ಸೌಮಿಲ್ ಗಾಂಧಿ ಹೇಳಿದ್ದಾರೆ. ಬೆಲೆಬಾಳುವ ವಸ್ತುಗಳು ಮತ್ತು ಚಿನ್ನವನ್ನು ಖರೀದಿಸಲು ಈ ದಿನವನ್ನು ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಅಕ್ಷಯ ತೃತೀಯ ಶನಿವಾರ. ಇದಲ್ಲದೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್ ಚಿನ್ನ 1,988 ಡಾಲರ್‌ಗೆ ಕುಸಿದರೆ, ಬೆಳ್ಳಿ 25.12 ಡಾಲರ್‌ಗೆ ಇಳಿಕೆಯಾಗಿದೆ.
ಖರೀದಿಸುವ ಮೊದಲು ಇದನ್ನು ತಿಳಿದುಕೊಳ್ಳಿ
ನೀವು ಕೂಡ ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ನೀವು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ನೀವು ಚಿನ್ನದ ಶುದ್ಧತೆ ನಿಜವೇ ಅಥವಾ ನಕಲಿಯೇ ಎಂಬುದನ್ನು ಪರಿಶೀಲಿಸಬಹುದು. ಇದಲ್ಲದೇ ಈ ಆಪ್ ಮೂಲಕವೂ ದೂರು ನೀಡಬಹುದು.
ಚಿನ್ನದ ದರವನ್ನು ಪರಿಶೀಲಿಸಿ
ನಿಮ್ಮ ಮನೆಯಲ್ಲಿ ಕುಳಿತು ಚಿನ್ನದ ಬೆಲೆಯನ್ನು ಸಹ ನೀವು ಪರಿಶೀಲಿಸಬಹುದು. ಇಂಡಿಯನ್ ಬುಲಿಯನ್ ಮತ್ತು ಜ್ಯುವೆಲರ್ಸ್ ಅಸೋಸಿಯೇಷನ್ ಪ್ರಕಾರ, ನೀವು 8955664433 ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಬೆಲೆಯನ್ನು ಪರಿಶೀಲಿಸಬಹುದು. ನೀವು ಯಾವ ಸಂಖ್ಯೆಯಿಂದ ಸಂದೇಶವನ್ನು ಕಳುಹಿಸುತ್ತೀರೋ ಅದೇ ಸಂಖ್ಯೆಗೆ ನಿಮ್ಮ ಸಂದೇಶವು ಬರುತ್ತದೆ.Akshaya Tritiya 2023 Gold Price :