Mithun Chakraborty: ಬಾಲಿವುಡ್ ನ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರಿಗೆ ಬ್ರೇನ್ ಸ್ಟ್ರೋಕ್! ಆಸ್ಪತ್ರೆಯಲ್ಲಿ ಚಿಕಿತ್ಸೆ!

Written by Pooja Siddaraj

Published on:

Mithun Chakraborty: ಇದೀಗ ಬಂದ ಸುದ್ದಿಯ ಅನುಸಾರ ಬಾಲಿವುಡ್ ನ ಖ್ಯಾತ ಹಿರಿಯ ನಟ, ರಾಷ್ಟ್ರಪ್ರಶಸ್ತಿ ವಿಜೇತರಾಗಿರುವ ನಟ ಮಿಥುನ್ ಚಕ್ರವರ್ತಿ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಇವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಬೆಳಗ್ಗೆ ಸುಮಾರು 9;40 ರ ವೇಳೆಗೆ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತ್ತಾದ ಅಪೋಲೊ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯ ನಟ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ಹೇಳಲಾಗಿದ್ದು, ನಂತರ ಅವರಿಗೆ ಅನೇಕ ಟೆಸ್ಟ್ ಗಳನ್ನು ಮಾಡಲಾಗಿದೆ. ರೇಡಿಯಾಲಜಿ ವಿಭಾಗದಲ್ಲೊ ಟೆಸ್ಟ್ ಗಳು ಜೊತೆಗೆ MRI ಸ್ಕ್ಯಾನಿಂಗ್ ಕೂಡ ಮಾಡಲಾಗಿದ್ದು, ಆಗ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದೆ ಎನ್ನುವ ವಿಚಾರ ತಿಳಿದುಬಂದಿದೆ. ಆದರೆ ಪಾರ್ಶ್ವವಾಯು ಕಡಿಮೆ ಇದ್ದ ಕಾರಣ ಅವರ ಆರೋಗ್ಯಕ್ಕೆ ಹೆಚ್ಚಿನ ಸಮಸ್ಯೆ ಆಗಿಲ್ಲ ಎಂದು ಹೆಲ್ತ್ ಬುಲೆಟಿನ್ ನಲ್ಲಿ ಹೇಳಲಾಗಿದೆ.

ಈಗ ಮಿಥುನ್ ಚಕ್ರವರ್ತಿ ಅವರಿಗೆ ಪ್ರಜ್ಞೆ ಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಅಭಿಮಾನಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ, ಬೇಗ ಹುಷಾರಾಗಿ ಬರುತ್ತಾರೆ ಎಂದು ಆಸ್ಪತ್ರೆ ಸಿಬ್ಬಂದಿಗಳು ತಿಳಿಸಿದ್ದಾರೆ.

Leave a Comment