Nikhil Kumaraswamy: ಮದುವೆ ಸಮಯದಲ್ಲಿ ಧರಿಸಿದ್ದ ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಸ್ಪಷ್ಟನೆ ಕೊಟ್ಟ ನಿಖಿಲ್

Written by Pooja Siddaraj

Published on:

Nikhil Kumaraswamy: ಇದೀಗ ನಮ್ಮ ರಾಜ್ಯದಲ್ಲಿ ವರ್ತೂರ್ ಸಂತೋಷ್ ಮತ್ತು ಡಿಬಾಸ್ ದರ್ಶನ್ ಅವರ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿದ್ದ ವರ್ತೂರ್ ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಮಾಡಲಾಗಿದೆ. ಅರಣ್ಯಾಧಿಕಾರಿಗಳು ವರ್ತೂರ್ ಸಂತೋಷ್ ಅವರ ಬಳಿ ಹುಲಿ ಉಗುರಿನ ಪೆಂಡೆಂಟ್ ಇರುವ ಚಿನ್ನದ ಚೈನ್ ಧರಿಸಿರುವುದಕ್ಕೆ ಅರೆಸ್ಟ್ ಮಾಡಿದ್ದಾರೆ.

ವರ್ತೂರ್ ಸಂತೋಷ್ ಅವರನ್ನು ವಿಚಾರಣೆ ನಡೆಸಿ, ಎಲ್ಲಾ ಮಾಹಿತಿ ಪಡೆದುಕೊಂಡ ನಂತರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವರ್ತೂರ್ ಸಂತೋಷ್ ಅವರು ಜೈಲು ಸೇರಿದ್ದಾಗಿದೆ. ಈ ಘಟನೆ ಬಳಿಕ ಡಿಬಾಸ್ ದರ್ಶನ್ ಅವರ ಮೇಲೆ ಕೂಡ ದೂರು ದಾಖಲಾಯಿತು. ಅದಾದ ಬಳಿಕ ನಟ ಜಗ್ಗೇಶ್ ಅವರು ತಮ್ಮ ಬಳಿ ಇರುವ ಹುಲಿ ಉಗುರಿನ ಉಂಗುರ ತೋರಿಸಿ ಮಾತನಾಡಿರುವ ವಿಚಾರ ಕೂಡ ವೈರಲ್ ಆಯಿತು.

ಅಷ್ಟೇ ಅಲ್ಲದೆ, ಕನ್ನಡದ ಇನ್ನು ಬೇರೆ ಕಲಾವಿದರು ಶಿವ ರಾಜ್ ಕುಮಾರ್, ಯಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ನಟ ನಿಖಿಲ್ ಕುಮಾರಸ್ವಾಮಿ ಅವರು ಮದುವೆ ದಿನ ಧರಿಸಿದ್ದ ಹುಲಿ ಪೆಂಡೆಂಟ್ ಇರುವ ಫೋಟೋ ಮತ್ತು ವಿಡಿಯೋ ಈಗ ವೈರಲ್ ಆಗಿದೆ. ಈ ವಿಚಾರ ವೈರಲ್ ಆಗುತ್ತಿದ್ದ ಹಾಗೆ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ತಮ್ಮ ಬಳಿ ಇರುವ ಪೆಂಡೆಂಟ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಬಳಿ ಇರುವುದು ನಕಲಿ ಉಗುರು ಎಂದಿದ್ದಾರೆ ನಿಖಿಲ್.

“ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ..” ಎಂದು ಬರೆದುಕೊಂಡಿದ್ದಾರೆ ನಿಖಿಲ್ ಕುಮಾರಸ್ವಾಮಿ.

Leave a Comment