Latest Breaking News

Ramya :ಸ್ಟಾರ್ ನಟರ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ರಮ್ಯಾ ಹೇಳಿದ್ದೇನು ?

0 8,714

Get real time updates directly on you device, subscribe now.

Ramya about Darshan incident ಸ್ಟಾರ್ ನಟರ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ಎನ್ನುವುದು ನಡೆಯುತ್ತಲೇ ಇರುತ್ತದೆ. ಇದು ಸ್ಯಾಂಡಲ್ ವುಡ್ ಗೆ ಮಾತ್ರ ಸೀಮಿತವಾಗಿಲ್ಲ, ಎಲ್ಲಾ ಭಾಷೆಗಳಲ್ಲಿ ಕೂಡ ಫ್ಯಾನ್ ವಾರ್ ಎನ್ನುವುದು ಬಹಳ ಸಾಮಾನ್ಯ ಎನಿಸಿದೆ. ತಮ್ಮ ಮೆಚ್ಚಿನ ಸ್ಟಾರ್ ನಟರನ್ನು ಅಭಿಮಾನಿಸುವ ಅಭಿಮಾನಿಗಳು, ಆ ಅಭಿಮಾನದ ಕಾರಣದಿಂದಲೇ ಬೇರೆ ನಟರನ್ನು ಅವಮಾನಿಸುವ ಕೆಲಸಗಳನ್ನು ಮಾಡುತ್ತಿದ್ದಾರೆ. ಇತ್ತೀಚಿಗಷ್ಟೇ ಸ್ಯಾಂಡಲ್ವುಡ್ ನಟ ದರ್ಶನ್ ಅವರ ತಮ್ಮ ಹೊಸ ಸಿನಿಮಾ ಕ್ರಾಂತಿಯ ಎರಡನೇ ಹಾಡನ್ನು ಬಿಡುಗಡೆ ಮಾಡಲು ಹೋದಾಗ ಹೊಸಪೇಟೆಯಲ್ಲಿ ನಡೆದ ಅಹಿತಕರ ಘಟನೆ ದೊಡ್ಡ ಸುದ್ದಿಯಾಗಿದೆ. ಹೀಗೆ ಅಭಿಮಾನದ ಹೆಸರಿನಲ್ಲಿ ಅಭಿಮಾನಿಗಳು ನಡೆದುಕೊಳ್ಳುತ್ತಿರುವ ರೀತಿಯನ್ನು ನೋಡಿ, ಇದೇ ವಿಚಾರವಾಗಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ತಮ್ಮ ಟ್ವಿಟರ್ ಖಾತೆಯಲ್ಲಿ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Darshan Thoogudeepa :ಹೊಸ ಪೇಟೆಯಲ್ಲಿ ದರ್ಶನ್ ಗೆ ಆಗಿದ್ದೇನು ?ನಟ ದರ್ಶನ್ ಏನಂದ್ರು ?

ರಮ್ಯಾ ( Ramya ) ತಮ್ಮ ಟ್ವಿಟರ್ ನಲ್ಲಿ, ಚಿತ್ರರಂಗದಲ್ಲಿ ಇವತ್ತು ತಲುಪಿರುವ ಹಂತಕ್ಕೆ ಬರಲು ಪ್ರತಿಯೊಬ್ಬರೂ ತಮ್ಮದೇ ಆದ ಸವಾಲುಗಳನ್ನು ಎದುರಿಸಿಕೊಂಡು ಬಂದಿರುತ್ತಾರೆ. ಕೇವಲ ನಾಯಕ ನಟರು ಮತ್ತು ನಾಯಕ ನಟಿಯರಷ್ಟೇ ಅಲ್ಲ , ಸಂಗೀತ ನಿರ್ದೇಶಕರು, ಗಾಯಕರು, ನೃತ್ಯ ನಿರ್ದೇಶಕರು, ಬರಹಗಾರರು, ಫೈಟ್ ಮಾಸ್ಟರ್ ಗಳು ಮುಂತಾದ ಪ್ರತಿಯೊಬ್ಬ ತಂತ್ರಜ್ಞರೂ ಅನೇಕ ಕಷ್ಟಕರವಾದ ಪರಿಸ್ಥಿತಿಗಳನ್ನು ಎದುರಿಸಿ ಉನ್ನತ ಸ್ಥಾನಕ್ಕೆ ಬಂದಿರುತ್ತಾರೆ. ಕೆಲವರ ಕಷ್ಟಗಳು ಸಾರ್ವಜನಿಕವಾಗಿ ನಮಗೆ ತಿಳಿದಿರುತ್ತೆ , ಮತ್ತಷ್ಟು ತಿಳಿದಿರುವುದಿಲ್ಲ. ಕೆಲವರು ಉನ್ನತ ಸ್ಥಾನಕ್ಕೆ ಏರಿದ್ದರೆ, ಅನೇಕರಿಗೆ ದೊಡ್ಡ ಯಶಸ್ಸು ಗಳಿಸಲು ಸಾಧ್ಯವಾಗಿಲ್ಲದೇ ಇರಬಹುದು. ಚಿತ್ರರಂಗದಲ್ಲಿ ತಮ್ಮ ಆಸೆಯ ಗೋಪುರ ಕಟ್ಟಿಕೊಂಡು ಬರುವವರ ಹಿನ್ನೆಲೆಗಳು ಬೇರೆಯೇ ಇರಬಹುದು.

ಹಲವರಿಗೆ ಎರಡು ಹೊತ್ತು ಊಟ ಗಿಟ್ಟಿಸಿಕೊಳ್ಳುವುದು ಕಷ್ಟವಾಗಿದ್ದರೆ, ಹಲವರಿಗೆ ಮೈ ತುಂಬಾ ಸಾಲ ಮಾಡಿಕೊಂಡು ಸಾಧನೆ ಮಾಡಬೇಕು ಅಂತ ಬಂದಿರಬಹುದು. ಹಲವರು ಇದ್ದುದ್ದೆಲ್ಲವನ್ನು ಬಿಟ್ಟು ಚಿತ್ರರಂಗದಲ್ಲಿ ಸಾಧಿಸಬೇಕೆಂದು ಬಿಟ್ಟು ಬಂದದ್ದು ಉಂಟು. ಯಶಸ್ಸು ಬಹಳ ಕಡಿಮೆ ಜನರ ಪಾಲಾಗಿದೆ ಅಷ್ಟೇ. ಆದರೆ ಶ್ರಮ ಪಟ್ಟವರ ಸಂಖ್ಯೆ ಎಣಿಸಲಸಾಧ್ಯ. ಎಲ್ಲಕ್ಕಿಂತ ಮುಖ್ಯ ಮನುಷ್ಯ ತನ್ನ ಬೇರುಗಳಿಗೆ ಗಟ್ಟಿಯಾಗಿ ಅಂಟಿಕೊಂಡಿರುವುದು ಮತ್ತು ತಾವು ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ ಮೇಲೆ ಬಂದ ಬಳಿಕ ತಮ್ಮಂತೆ ಕಷ್ಟ ಪಟ್ಟು ಶ್ರದ್ಧೆಯಿಂದ ಮಾಡಲು ಹಂಬಲ ಇರುವ ಪ್ರತಿಭೆಗಳನ್ನು ಹುಡುಕಿ ಸಹಾಯ ಮಾಡುವುದು ಉತ್ತಮ ನಡವಳಿಕೆ.

ಕೆಲಸದಲ್ಲಿ ನಾನು ಯಾವತ್ತಿಗೂ ನಂಬರ್ ೧ ಮತ್ತು ಈ ಸ್ಥಾನ ನನಗೆ ಮಾತ್ರ ದಕ್ಕಬೇಕು ಅನ್ನುವ ಅಹಂ ಬಿಟ್ಟು ನಮ್ಮಲ್ಲಿ ಯಾರೇ ಬಂದರೂ ಅದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು . ಯಶಸ್ಸು ,ಅಧಿಕಾರ , ಹಣ ಯಾವುದು ಶಾಶ್ವತವಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು . ಇಂದು ಅಭಿಮಾನಿ ಸಂಘಗಳು , ಅಭಿಮಾನಿ ಬಳಗಗಳು ತೋರುತ್ತಿರುವ ನಡವಳಿಕೆ ಬಹಳ ಚಿಂತಾಜನಕವಾಗಿದೆ. ತಮ್ಮ ಗುಂಪಿನಲ್ಲಿ ಅಥವಾ ಬಣದಲ್ಲಿ ಕಾಣಿಸಿಕೊಳ್ಳದ ಎಲ್ಲರನ್ನು ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ತಾಯಿ, ಹೆಂಡತಿ, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತ ಬಹಳ ಕೆಟ್ಟ ಮಾತುಗಳು ಆಡುವುದನ್ನು ಕಂಡಲ್ಲಿ ನೋವಾಗುತ್ತದೆ.

Darshan Thoogudeepa :ಹೊಸ ಪೇಟೆಯಲ್ಲಿ ದರ್ಶನ್ ಗೆ ಆಗಿದ್ದೇನು ?ನಟ ದರ್ಶನ್ ಏನಂದ್ರು ?

ನಮ್ಮ ಪ್ರಜ್ಞಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನುವುದು ನೋಡಿ ಬೇಜಾರಾಗ್ತಿದೆ. ಮುಂಚಿನಿಂದಲೂ ಅಭಿಮಾನಿ ಸಂಘಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದು ನಾವು ಕಂಡಿದ್ದೇವೆ, ಕೇಳಿದ್ದೇವೆ. ರಕ್ತದಾನ ಶಿಬಿರ, ಅನ್ನದಾನ, ವೃದ್ಧಾಶ್ರಮ, ಅನಾಥಾಶ್ರಮದಲ್ಲಿ ಸೇವೆ ಮಾಡುವುದು, ಗಿಡ ನೆಡುವುದು, ಪ್ರಕೃತಿ ಕಾಪಾಡುವುದು, ಬಡವರಿಗೆ ಆಹಾರ ಮತ್ತು ಔಷಧಿ ಹಂಚುವುದು ಮುಂತಾದ ಅನೇಕ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ಅಭಿಮಾನಿ ಸಂಘಗಳಿಗೆ ಇರುವ ಹೆಗ್ಗಳಿಕೆ. ಆದರೆ ಅಭಿಮಾನಿಗಳು ಅನ್ನುವ ಹೆಸರಿನಲ್ಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ರೂಪವನ್ನು , ಹೆಸರನ್ನು ಹಾಕಿಕೊಳ್ಳದೆ ಅನಾಮಧೇಯವಾಗಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತಾಡುವುದು ನಿಜ ವಿಷಾದನೀಯ.

ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ ಅಭಿಮಾನಿಗಳಿಗೆ ತಿಳವಳಿಕೆ ಹೇಳಿ ಅವರನ್ನು ಸುಸಂಸ್ಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿ ರೋ ಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು. ಕನ್ನಡ ಚಿತ್ರರಂಗ ಇವತ್ತು ದೇಶ ವಿದೇಶಗಳಲ್ಲಿ ದೊಡ್ಡ ಖ್ಯಾತಿಪಡೆದಿದೆ ..( Ramya ) IMDB ಉನ್ನತ ೧೦ ಚಿತ್ರಗಳ ಪಟ್ಟಿಯಲ್ಲಿ ೩ ಕನ್ನಡ ಚಿತ್ರಗಳಿವೆ ಅಂತ ಹೇಳಲು ನಮಗೆಲ್ಲ ಬಹಳ ಹೆಮ್ಮೆ ಆಗಬೇಕಿದೆ. ಕನ್ನಡ ಚಿತ್ರಗಳು ಈ ವರ್ಷ ಕಂಡ ಯಶಸ್ಸು ಬೇರಾವುದೇ ಭಾಷೆಯ ಚಿತ್ರಗಳಿಗೂ ಲಭ್ಯವಾಗಿಲ್ಲ.

ಇದಕ್ಕಿಂತ ಹೆಮ್ಮೆಯ ವಿಚಾರ ಮತ್ತು ಸ್ಪೂರ್ತಿ ಬೇಕಿದೆಯೇ ? ಕಲಾದೇವಿಯ ಸೇವೆ ಮಾಡಿಕೊಂಡು ಸಮಾಜಕ್ಕೂ , ನಮ್ಮ ನಮ್ಮೆಲ್ಲರ ಗುರಿ ಚಿತ್ರರಂಗಕ್ಕೂ ಒಳ್ಳೆಯ ಹೆಸರು ತರುವುದು ಆಗಿರಬೇಕು . ಇದು ನಮ್ಮೆಲ್ಲರ ಜವಾಬ್ದಾರಿಯೂ ಹೌದು . ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಉತ್ತೇಜಿಸೋಣ . ಪ್ರೀತಿ ಮತ್ತು ವಿಶ್ವಾಸ ತುಂಬಿದ ಉತ್ತಮ ಸಮಾಜ ನಿರ್ಮಿಸೋಣ . ದ್ವೇಷ ಮತ್ತು ಅಸೂಯೆಗಳನ್ನು ದಮನೆ ಮಾಡೋಣ. ಎಲ್ಲರಿಗೂ ಒಳಿತಾಗಲಿ ಎಂದು ಬರೆದುಕೊಂಡಿದ್ದಾರೆ.

Get real time updates directly on you device, subscribe now.

Leave a comment