Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಇಂದು ಪ್ಯಾನ್ ಇಂಡಿಯಾ ಹೀರೋಯಿನ್, ಕಾಲಿವುಡ್ ಬಾಲಿವುಡ್ ಎಲ್ಲಾ ಕಡೆ ಸಿನಿಮಾ ಮಾಡುತ್ತಾ ಸುದ್ದಿಯಾಗುತ್ತಾರೆ ರಶ್ಮಿಕಾ. ಇದೀಗ ರಶ್ಮಿಕಾ ಅವರು ಮತ್ತೊಮ್ಮೆ ಲಿಪ್ ಲಾಕ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಈ ಮೊದಲು ನಟ ವಿಜಯ್ ದೇವರಕೊಂಡ ಅವರೊಡನೆ 2 ಸಿನಿಮಾಗಳಲ್ಲಿ ಲಿಪ್ ಲಾಕ್ ಮಾಡಿ ಸುದ್ದಿಯಾಗಿದ್ದರು. ಇದೀಗ ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸಿ ಸುದ್ದಿಯಾಗಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಮೂಲತಃ ಕನ್ನಡದ ಹುಡುಗಿ, ಇವರು ನಟನೆ ಶುರು ಮಾಡಿದ್ದು ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ. ಬಳಿಕ ಚಲೋ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ ಅವರಿಗೆ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿದ್ದು ಗೀತಾ ಗೋವಿಂದಂ ಸಿನಿಮಾ. ಈ ಸಿನಿಮಾ ಇಂದ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಜೋಡಿ ಕೂಡ ಹೆಚ್ಚು ಹೆಸರು ಮಾಡಿತು ಎಂದರೆ ತಪ್ಪಲ್ಲ. ಇವರಿಬ್ಬರ ಬಗ್ಗೆ ಕೂಡ ಆಗಾಗ ಸುದ್ದಿಗಳು ಕೇಳಿಬರುತ್ತಲೇ ಇರುತ್ತದೆ.
ಕನ್ನಡ ಮತ್ತು ತೆಲುಗಿನಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ರಶ್ಮಿಕಾ ಮಂದಣ್ಣ ಅವರು ನಂತರ ತಮಿಳು ಚಿತ್ರರಂಗಕ್ಕೂ ಲಗ್ಗೆ ಇಟ್ಟರು. ನಟ ಕಾರ್ತಿ ಅವರೊಡನೆ ವಿಜಯ್ ಅವರೊಡನೆ ಸಿನಿಮಾಗಳಲ್ಲಿ ನಟಿಸಿದರು. ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ ರಶ್ಮಿಕಾ ಅವರಿಗೆ ಪುಷ್ಪ ಸಿನಿಮಾ ಇನ್ನು ದೊಡ್ಡ ಮಟ್ಟದ ಕ್ರೇಜ್ ತಂದುಕೊಟ್ಟಿತು, ಈ ಸಿನಿಮಾ ಇಂದ ರಶ್ಮಿಕಾ ಅವರು ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಗುರುತಿಸಿಕೊಂಡರು. ಬಾಲಿವುಡ್ ಇಂದಲೂ ಅವಕಾಶ ಪಡೆದುಕೊಂಡರು.
ಬಿಗ್ ಬಿ ಅಮಿತಾಭ್ ಬಚ್ಚನ್ ಅವರೊಡನೆ ಗುಡ್ ಬೈ ಸಿನಿಮಾ, ಸಿದ್ಧಾರ್ಥ್ ಮಲ್ಹೋತ್ರಾ ಅವರೊಡನೆ ಮಿಷನ್ ಮಜ್ನು ಸಿನಿಮಾಗಳಲ್ಲಿ ನಟಿಸಿದರು. ನಂತರ ರಶ್ಮಿಕಾ ಅವರು ನಟ ರಣಬೀರ್ ಕಪೂರ್ ಅವರೊಡನೆ ಅನಿಮಲ್ ಸಿನಿಮಾದಲ್ಲಿ ನಟಿಸಿದ್ದಾರೆ. ಹಾಗೆಯೇ ಸೌತ್ ಇಂಡಿಯಾದಲ್ಲೂ ಬ್ಯುಸಿ ಆಗಿದ್ದಾರೆ ರಶ್ಮಿಕಾ. ಸಿನಿಮಾ ವಿಚಾರಗಳು ಮಾತ್ರವಲ್ಲದೆ ಆಗಾಗ ಪರ್ಸನಲ್ ವಿಚಾರಕ್ಕೂ ರಶ್ಮಿಕಾ ಅವರು ಸುದ್ದಿಯಾಗುತ್ತಾರೆ.
ಇದೀಗ ಇವರು ದೀಪಾವಳಿ ಹಬ್ಬವನ್ನು ವಿಜಯ್ ದೇವರಕೊಂಡ ಅವರ ಮನೆಯಲ್ಲಿ ಆಚರಿಸಿದ್ದಾರೆ ಎನ್ನುವ ವಿಚಾರ ಸದ್ದು ಮಾಡುತ್ತಿದೆ. ಹಬ್ಬದ ದಿವಸ ರಶ್ಮಿಕಾ ಅವರು ಕೆಲವು ಫೋಟೋಸ್ ಶೇರ್ ಮಾಡಿದ್ದಾರೆ. ಅದೇ ರೀತಿ ವಿಜಯ್ ದೇವರಕೊಂಡ ಅವರು ಕೂಡ ಕೆಲವು ಫೋಟೋಸ್ ಶೇರ್ ಮಾಡಿದ್ದು, ಈ ಎರಡು ಫೋಟೋಸ್ ಗಳಲ್ಲಿ ಇರುವ ಬ್ಯಾಗ್ರೌಂಡ್ ನೋಡಿದ ನೆಟ್ಟಿಗರು, ರಶ್ಮಿಕಾ ಇವರೊಡನೆ ಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ ಎನ್ನುತ್ತಿದ್ದಾರೆ.
ಈಗಾಗಲೇ ವಿಜಯ್ ದೇವರಕೊಂಡ ಅವರೊಡನೆ ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ, ಇಬ್ಬರು ರಿಲೇಶನ್ಶಿಪ್ ನಲ್ಲಿದ್ದಾರೆ ಎನ್ನುವ ವಿಷಯ ಸುದ್ದಿಯಾಗುತ್ತಿದೆ. ಅದರ ಬೆನ್ನಲ್ಲೇ ಈಗ ದೀಪಾವಳಿ ಹಬ್ಬದ ಫೊಟೋಸ್ ವೈರಲ್ ಆಗಿದ್ದು, ಇವರಿಬ್ಬರು ನಿಜಕ್ಕೂ ಮದುವೆ ಆಗುತ್ತಾರೆ ಎಂದು ಹೇಳಲಾಗುತ್ತಿದೆ.