Rashmika Mandanna: ಕಪ್ಪು ಸೀರೆಯಲ್ಲಿ ಕಂಗೊಳಿಸಿದ ರಶ್ಮಿಕಾ! ಫೋಟೋಸ್ ವೈರಲ್

Written by Pooja Siddaraj

Published on:

Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಇಂದು ಪ್ಯಾನ್ ಇಂಡಿಯಾ ಹೀರೋಯಿನ್, ಕಾಲಿವುಡ್ ಬಾಲಿವುಡ್ ಎಲ್ಲಾ ಕಡೆ ಸಿನಿಮಾ ಮಾಡುತ್ತಾ ಸುದ್ದಿಯಾಗುತ್ತಾರೆ ರಶ್ಮಿಕಾ. ಇದೀಗ ರಶ್ಮಿಕಾ ಅವರು ಮತ್ತೊಮ್ಮೆ ಲಿಪ್ ಲಾಕ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಈ ಮೊದಲು ನಟ ವಿಜಯ್ ದೇವರಕೊಂಡ ಅವರೊಡನೆ 2 ಸಿನಿಮಾಗಳಲ್ಲಿ ಲಿಪ್ ಲಾಕ್ ಮಾಡಿ ಸುದ್ದಿಯಾಗಿದ್ದರು, ಇದೀಗ ಹೊಸ ಫೋಟೋಸ್ ಇಂದ ಸುದ್ದಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಮೂಲತಃ ಕನ್ನಡದ ಹುಡುಗಿ, ಇವರು ನಟನೆ ಶುರು ಮಾಡಿದ್ದು ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ. ಬಳಿಕ ಚಲೋ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ ಅವರಿಗೆ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿದ್ದು ಗೀತಾ ಗೋವಿಂದಂ ಸಿನಿಮಾ. ಈ ಸಿನಿಮಾ ಇಂದ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಜೋಡಿ ಕೂಡ ಹೆಚ್ಚು ಹೆಸರು ಮಾಡಿತು ಎಂದರೆ ತಪ್ಪಲ್ಲ. ಇವರಿಬ್ಬರ ಬಗ್ಗೆ ಕೂಡ ಆಗಾಗ ಸುದ್ದಿಗಳು ಕೇಳಿಬರುತ್ತಲೇ ಇರುತ್ತದೆ.

ಕನ್ನಡ ಮತ್ತು ತೆಲುಗಿನಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ರಶ್ಮಿಕಾ ಮಂದಣ್ಣ ಅವರು ನಂತರ ತಮಿಳು ಚಿತ್ರರಂಗಕ್ಕೂ ಲಗ್ಗೆ ಇಟ್ಟರು. ನಟ ಕಾರ್ತಿ ಅವರೊಡನೆ ವಿಜಯ್ ಅವರೊಡನೆ ಸಿನಿಮಾಗಳಲ್ಲಿ ನಟಿಸಿದರು. ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ ರಶ್ಮಿಕಾ ಅವರಿಗೆ ಪುಷ್ಪ ಸಿನಿಮಾ ಇನ್ನು ದೊಡ್ಡ ಮಟ್ಟದ ಕ್ರೇಜ್ ತಂದುಕೊಟ್ಟಿತು, ಈ ಸಿನಿಮಾ ಇಂದ ರಶ್ಮಿಕಾ ಅವರು ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಗುರುತಿಸಿಕೊಂಡರು. ಬಾಲಿವುಡ್ ಇಂದಲೂ ಅವಕಾಶ ಪಡೆದುಕೊಂಡರು.

ಬಿಗ್ ಬಿ ಅಮಿತಾಭ್ ಬಚ್ಚನ್ ಅವರೊಡನೆ ಗುಡ್ ಬೈ ಸಿನಿಮಾ, ಸಿದ್ಧಾರ್ಥ್ ಮಲ್ಹೋತ್ರಾ ಅವರೊಡನೆ ಮಿಷನ್ ಮಜ್ನು ಸಿನಿಮಾಗಳಲ್ಲಿ ನಟಿಸಿದರು. ನಂತರ ರಶ್ಮಿಕಾ ಅವರು ನಟ ರಣಬೀರ್ ಕಪೂರ್ ಅವರೊಡನೆ ಅನಿಮಲ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಹಾಡುಗಳು ಜನರಿಗೆ ಬಹಳ ಇಷ್ಟವಾಗಿದೆ. ಸಿನಿಮಾ ವಿಚಾರಕ್ಕೆ ಸುದ್ದಿಯಾಗುವ ರಶ್ಮಿಕಾ ಅವರು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್. ಸಾಕಷ್ಟು ವಿಷಯಗಳನ್ನು ಅಭಿಮಾನಿಗಳ ಜೊತೆಗೆ ಶೇರ್ ಮಾಡುತ್ತಾರೆ ರಶ್ಮಿಕಾ.

ಇದೀಗ ರಶ್ಮಿಕಾ ಅವರು ಕಪ್ಪು ಬಣ್ಣದ ಸೀರೆ ಧರಿಸಿ ಫೋಟೋಸ್ ಗೆ ಪೋಸ್ ನೀಡಿದ್ದು, ಬಹಳ ಹಾಟ್ ಆಗಿ ಕಾಣುತ್ತಿದ್ದರೆ. ಅನಿಮಲ್ ಸಿನಿಮಾ ಪ್ರೊಮೋಷನ್ ಗಾಗಿ ಈ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ರಶ್ಮಿಕಾ. ಇದೀಗ ಇವರ ಫೋಟೋಸ್ ವೈರಲ್ ಆಗುತ್ತಿದ್ದು, ರಶ್ಮಿಕಾ ಅವರನ್ನು ನೋಡಿದ ನೆಟ್ಟಿಗರು ಕೂಡ ಫಿದಾ ಆಗಿದ್ದಾರೆ. ಬಹಳ ಸುಂದರವಾಗಿ ಕಾಣುತ್ತಿದ್ದೀರಾ ಎಂದು ಕಮೆಂಟ್ಸ್ ಸಹ ಬರೆದಿದ್ದಾರೆ.

Leave a Comment