Rashmika Mandanna: ಕಿಸ್ಸಿಂಗ್ ಸೀನ್ ನಲ್ಲಿ ನಟಿಸಲು ಹೆಚ್ಚುವರಿ ಸಂಭಾವನೆ ಪಡೆದ ರಶ್ಮಿಕಾ ಮಂದಣ್ಣ, ಎಷ್ಟು ಗೊತ್ತಾ?

Written by Pooja Siddaraj

Published on:

Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಇಂದು ಪ್ಯಾನ್ ಇಂಡಿಯಾ ಹೀರೋಯಿನ್, ಕಾಲಿವುಡ್ ಬಾಲಿವುಡ್ ಎಲ್ಲಾ ಕಡೆ ಸಿನಿಮಾ ಮಾಡುತ್ತಾ ಸುದ್ದಿಯಾಗುತ್ತಾರೆ ರಶ್ಮಿಕಾ. ಇದೀಗ ರಶ್ಮಿಕಾ ಅವರು ಮತ್ತೊಮ್ಮೆ ಲಿಪ್ ಲಾಕ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಈ ಮೊದಲು ನಟ ವಿಜಯ್ ದೇವರಕೊಂಡ ಅವರೊಡನೆ 2 ಸಿನಿಮಾಗಳಲ್ಲಿ ಲಿಪ್ ಲಾಕ್ ಮಾಡಿ ಸುದ್ದಿಯಾಗಿದ್ದರು, ಅನಿಮಲ್ ಸಿನಿಮಾದ ಲಿಪ್ ಲಾಕ್ ದೃಶ್ಯಕ್ಕೆ ರಶ್ಮಿಕಾ ಅವರು ಪಡೆದಿರುವ ಹೆಚ್ಚುವರಿ ಸಂಭಾವನೆ ಎಷ್ಟು ಗೊತ್ತಾ?

ರಶ್ಮಿಕಾ ಮಂದಣ್ಣ ಅವರು ಮೂಲತಃ ಕನ್ನಡದ ಹುಡುಗಿ, ಇವರು ನಟನೆ ಶುರು ಮಾಡಿದ್ದು ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ. ಬಳಿಕ ಚಲೋ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ ಅವರಿಗೆ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿದ್ದು ಗೀತಾ ಗೋವಿಂದಂ ಸಿನಿಮಾ. ಈ ಸಿನಿಮಾ ಇಂದ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಜೋಡಿ ಕೂಡ ಹೆಚ್ಚು ಹೆಸರು ಮಾಡಿತು ಎಂದರೆ ತಪ್ಪಲ್ಲ. ಇವರಿಬ್ಬರ ಬಗ್ಗೆ ಕೂಡ ಆಗಾಗ ಸುದ್ದಿಗಳು ಕೇಳಿಬರುತ್ತಲೇ ಇರುತ್ತದೆ.

ಕನ್ನಡ ಮತ್ತು ತೆಲುಗಿನಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ರಶ್ಮಿಕಾ ಮಂದಣ್ಣ ಅವರು ನಂತರ ತಮಿಳು ಚಿತ್ರರಂಗಕ್ಕೂ ಲಗ್ಗೆ ಇಟ್ಟರು. ನಟ ಕಾರ್ತಿ ಅವರೊಡನೆ ವಿಜಯ್ ಅವರೊಡನೆ ಸಿನಿಮಾಗಳಲ್ಲಿ ನಟಿಸಿದರು. ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ ರಶ್ಮಿಕಾ ಅವರಿಗೆ ಪುಷ್ಪ ಸಿನಿಮಾ ಇನ್ನು ದೊಡ್ಡ ಮಟ್ಟದ ಕ್ರೇಜ್ ತಂದುಕೊಟ್ಟಿತು, ಈ ಸಿನಿಮಾ ಇಂದ ರಶ್ಮಿಕಾ ಅವರು ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಗುರುತಿಸಿಕೊಂಡರು. ಬಾಲಿವುಡ್ ಇಂದಲೂ ಅವಕಾಶ ಪಡೆದುಕೊಂಡರು.

ಬಿಗ್ ಬಿ ಅಮಿತಾಭ್ ಬಚ್ಚನ್ ಅವರೊಡನೆ ಗುಡ್ ಬೈ ಸಿನಿಮಾ, ಸಿದ್ಧಾರ್ಥ್ ಮಲ್ಹೋತ್ರಾ ಅವರೊಡನೆ ಮಿಷನ್ ಮಜ್ನು ಸಿನಿಮಾಗಳಲ್ಲಿ ನಟಿಸಿದರು. ನಂತರ ರಶ್ಮಿಕಾ ಅವರು ನಟ ರಣಬೀರ್ ಕಪೂರ್ ಅವರೊಡನೆ ಅನಿಮಲ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿಮಾದ ರೊಮ್ಯಾಂಟಿಕ್ ಹಾಡು ಇತ್ತೀಚೆಗೆ ರಿಲೀಸ್ ಆಯಿತು. ಈ ಹಾಡಿನಲ್ಲಿ ರಶ್ಮಿಕಾ ಅವರು ರಣಬೀರ್ ಕಪೂರ್ ಅವರೊಡನೆ ಲಿಪ್ ಲಾಕ್ ಮಾಡಿದ್ದಾರೆ.

ಹಾಡು ಬಿಡುಗಡೆ ಆಗುತ್ತಿದ್ದ ಹಾಗೆಯೇ ಈ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗಿತ್ತು, ಇದೀಗ ರಶ್ಮಿಕಾ ಅವರು ಪಡೆದಿರುವ ಸಂಭಾವನೆ ವಿಚಾರ ಸುದ್ದಿಯಾಗುತ್ತಿದೆ. ರಶ್ಮಿಕಾ ಅವರು ಅನಿಮಲ್ ಸಿನಿಮಾಗೆ ಒಟ್ಟು 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದ್ದು, ಕಿಸ್ಸಿಂಗ್ ದೃಶ್ಯಕ್ಕೆ ಪ್ರತ್ಯೇಕವಾಗಿ 20 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರಂತೆ. ರಶ್ಮಿಕಾ ಅವರು ಸಂಭಾವನೆಯನ್ನು ಇಷ್ಟು ಹೆಚ್ಚಿಸಿಕೊಂಡಿದ್ದಾರಾ ಎನ್ನುವ ವಿಚಾರ ಈಗ ಸುದ್ದಿಯಾಗಿದೆ.

Leave a Comment