Rashmika Vijay: ಎಂಗೇಜ್ಮೆಂಟ್ ವದಂತಿ ಬೆನ್ನಲ್ಲೇ ವಿಯೆಟ್ನಮ್ ನಲ್ಲಿ ಸುತ್ತಾಡ್ತಿದ್ದಾರ ರಶ್ಮಿಕಾ ವಿಜಯ್ ದೇವರಕೊಂಡ?

0 12

Rashmika Vijay: ನಟಿ ರಶ್ಮಿಕಾ ಮಂದಣ್ಣ ಅವರು ಇಂದು ಪ್ಯಾನ್ ಇಂಡಿಯಾ ಹೀರೋಯಿನ್, ಕಾಲಿವುಡ್ ಬಾಲಿವುಡ್ ಎಲ್ಲಾ ಕಡೆ ಸಿನಿಮಾ ಮಾಡುತ್ತಾ ಸುದ್ದಿಯಾಗುತ್ತಾರೆ ರಶ್ಮಿಕಾ. ಹಾಗೆಯೇ ಬಾಯ್ ಫ್ರೆಂಡ್ ವಿಜಯ್ ದೇವರಕೊಂಡ ಅವರ ವಿಚಾರಕ್ಕೂ ಸುದ್ದಿಯಾಗುತ್ತಾರೆ. ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಅವರ ಜೊತೆಗೆ ಮುಂದಿನ ತಿಂಗಳೇ ಎಂಗೇಜ್ಮೆಂಟ್ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು.

ರಶ್ಮಿಕಾ ಮಂದಣ್ಣ ಅವರು ಮೂಲತಃ ಕನ್ನಡದ ಹುಡುಗಿ, ಇವರು ನಟನೆ ಶುರು ಮಾಡಿದ್ದು ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ. ಬಳಿಕ ಚಲೋ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ ಅವರಿಗೆ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿದ್ದು ಗೀತಾ ಗೋವಿಂದಂ ಸಿನಿಮಾ. ಈ ಸಿನಿಮಾ ಇಂದ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಜೋಡಿ ಕೂಡ ಹೆಚ್ಚು ಹೆಸರು ಮಾಡಿತು ಎಂದರೆ ತಪ್ಪಲ್ಲ. ಇವರಿಬ್ಬರ ಬಗ್ಗೆ ಕೂಡ ಆಗಾಗ ಸುದ್ದಿಗಳು ಕೇಳಿಬರುತ್ತಲೇ ಇರುತ್ತದೆ.

ಕನ್ನಡ ಮತ್ತು ತೆಲುಗಿನಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ರಶ್ಮಿಕಾ ಮಂದಣ್ಣ ಅವರು ನಂತರ ತಮಿಳು ಚಿತ್ರರಂಗಕ್ಕೂ ಲಗ್ಗೆ ಇಟ್ಟರು. ಈ ಸಿನಿಮಾ ಇಂದ ರಶ್ಮಿಕಾ ಅವರು ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಗುರುತಿಸಿಕೊಂಡು, ಬಾಲಿವುಡ್ ನಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್ ಅವರೊಡನೆ ಗುಡ್ ಬೈ ಸಿನಿಮಾ, ಸಿದ್ಧಾರ್ಥ್ ಮಲ್ಹೋತ್ರಾ ಅವರೊಡನೆ ಮಿಷನ್ ಮಜ್ನು ಸಿನಿಮಾಗಳಲ್ಲಿ ನಟಿಸಿದರು. ನಂತರ ರಶ್ಮಿಕಾ ಅವರು ನಟ ರಣಬೀರ್ ಕಪೂರ್ ಅವರೊಡನೆ ಅನಿಮಲ್ ಸಿನಿಮಾದಲ್ಲಿ ನಟಿಸಿದ್ದು, ಈ ಸಿನಿಮಾ ಬಿಡುಗಡೆಯಾಗಿ ಹಿಟ್ ಆಗಿದೆ.

ಇನ್ನು ರಶ್ಮಿಕಾ ಮಂದಣ್ಣ ಅವರು ಪರ್ಸನಲ್ ವಿಚಾರಕ್ಕೂ ಸುದ್ದಿಯಾಗುತ್ತಾರೆ. ವಿಜಯ್ ದೇವರಕೊಂಡ ಅವರೊಡನೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಷಯ ಗೊತ್ತೇ ಇದೆ. ಇವರಿಬ್ಬರು ಮದುವೆ ಆಗುತ್ತಾರೆ ಎಂದು ಸುದ್ದಿ ಹಬ್ಬಿತ್ತು, ಇದರ ಬೆನ್ನಲ್ಲೇ ಇದೀಗ ಈ ಜೋಡಿ ವಿಯೆಟ್ನಾಮ್ ನಲ್ಲಿ ಜೊತೆಯಾಗಿ ಸುತ್ತಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಇಬ್ಬರು ಬೇರೆ ಬೇರೆಯಾಗಿ ಪೋಸ್ಟ್ ಮಾಡಿದ್ದರು ಸಹ, ಈ ಜೋಡಿ ಜೊತೆಯಾಗಿ ವಿಯೆಟ್ನಾಮ್ ಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

Leave A Reply

Your email address will not be published.