Trisha: ಪ್ಯಾನ್ ಇಂಡಿಯಾ ಸ್ಟಾರ್ ನಯನತಾರ ಅವರನ್ನೇ ಓವರ್ ಟೇಕ್ ಮಾಡಿದ ನಟಿ ತ್ರಿಷಾ! ಒಂದು ಸಿನಿಮಾಗೆ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

0 25

Trisha:ಸೌತ್ ಇಂಡಿಯನ್ ಸಿನಿಮಾ ರಂಗದ ಕಲಾವಿದೆಯರು ಈಗ ಯಾವುದೇ ಬಾಲಿವುಡ್ ನಟಿಯರಿಗೂ ಕಡಿಮೆ ಇಲ್ಲ ಎನ್ನುವ ಹಂತಕ್ಕೆ ಬೆಳೆಯುತ್ತಿದ್ದಾರೆ. ಈಗ ಬಾಲಿವುಡ್ ನಟಿಯರಿಗಿಂತ ಸೌಟಿ ನಟಿಯರನ್ನೇ ಅಭಿಮಾನಿಗಳು ಕೂಡ ಇಷ್ಟಪಡುತ್ತಿದ್ದಾರೆ. ನಮ್ಮ ಸೌತ್ ಇಂಡಿಯಾದ ಟಾಪ್ ನಟಿಯರಾಗಿ ಹೆಸರು ಪಡೆದಿರುವವರು ನಟಿ ತ್ರಿಷಾ ಮತ್ತು ನಟಿ ನಯನತಾರ. ಲೇಡಿ ಸೂಪರ್ ಸ್ಟಾರ್ ಎಂದೇ ಹೆಸರು ಮಾಡಿರುವ ನಟಿ ನಯನತಾರ ಅವರನ್ನೇ ಈಗ ತ್ರಿಷಾ ಅವರು ಹಿಂದಿಕ್ಕಿದ್ದಾರೆ.

ನಟಿ ತ್ರಿಷಾ ಅವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ., ಇವರು 20 ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಬಣ್ಣದ ಲೋಕದಲ್ಲಿದ್ದಾರೆ. ತ್ರಿಷಾ ಅವರು ತಮಿಳು ಮತ್ತು ತೆಲುಗು ಭಾಷೆಯಲ್ಲಿ ಹೆಚ್ಚಾಗಿ ನಟಿಸುತ್ತಿದ್ದರು ಕೂಡ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಡನೆ ಪವರ್ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದರು. ತ್ರಿಷಾ ಅವರಿಗೆ ವಯಸ್ಸು 40 ದಾಟಿದೆ, ಆದರೆ ಇಂದಿಗೂ ಅವರಿಗೆ ಇರುವ ಬೇಡಿಕೆ ಮಾತ್ರ ಕಡಿಮೆ ಆಗಿಲ್ಲ.

ಈಗಲೂ ಸಾಕಷ್ಟು ಒಳ್ಳೆಯ ಸಿನಿಮಾಗಳು ತ್ರಿಷಾ ಅವರನ್ನು ಅರಸಿ ಬರುತ್ತಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ ಸಿನಿಮಾದಲ್ಲಿ ತ್ರಿಷಾ ಅವರು ಕುಂದವೈ ಪಾತ್ರದಲ್ಲಿ ನಟಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಸಿನಿಮಾಗೆ ತ್ರಿಷಾ ಅವರು ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.

ಇದಲ್ಲದೆ ನಟ ವಿಜಯ್ ಅವರೊಡನೆ ಲಿಯೋ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ ತ್ರಿಷಾ, ಈ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಜೊತೆಗೆ ತೆಲುಗಿನ ಸ್ಟಾರ್ ನಟ ಚಿರಂಜೀವಿ ಅವರೊಡನೆ ಕೂಡ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, 12 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಇಷ್ಟು ದಿವಸಗಳ ಕಾಲ ನಟಿ ನಯನತಾರ ಅವರು ಅತಿಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿ ಗುರುತಿಸಿಕೊಂಡಿದ್ದರು.

ಇತ್ತೀಚೆಗೆ ನಯನತಾರ ಅವರು ಬಾಲಿವುಡ್ ನ ಸ್ಟಾರ್ ಹೀರೋ ಶಾರುಖ್ ಖಾನ್ ಅವರಿಗೆ ನಾಯಕಿಯಾಗಿ ಜವಾನ್ ಸಿನಿಮಾದಲ್ಲಿ ನಟಿಸಿದರು. ಈ ಸಿನಿಮಾಗೆ ನಯನತಾರ ಅವರು 11 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ತ್ರಿಷಾ ಅವರು ನಯನತಾರ ಅವರನ್ನು ಹಿಂದಿಕ್ಕಿ, ಅತಿಹೆಚ್ಚು ಸಂಭಾವನೆ ಪಡೆಯುವ ನಟಿ ಎನ್ನಿಸಿಕೊಂಡಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ ಕರ್ನಾಟಕದ ಹುಡುಗಿ ಅನುಷ್ಕಾ ಶೆಟ್ಟಿ ಅವರಿದ್ದು, ಒಂದು ಸಿನಿಮಾಗೆ 6 ಕೋಟಿ ಸಂಭಾವನೆ ಪಡೆಯುತ್ತಾರೆ ಅನುಷ್ಕಾ.

Leave A Reply

Your email address will not be published.